ಮದ್ಯಸೇವಿಸಿ ಪುಂಡಾಟ ಮೆರೆದ ಅಭಿಷೇಕ್ ಅಂಬರೀಶ್ ಬಾವ ಆಡಂ ಬಿಡಪ
ಅಕ್ಟೋಬರ್ 25 ರಂದು ರಾತ್ರಿ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕುಡಿದು ವಾಹನ ಚಲಾಯಿಸುತ್ತಿದ್ದ ಆಡಂ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಲ್ಲದೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಿಂಬದಿ ವಾಹನ ಸವಾರನಿಗೆ ಅಡ್ಡಗಟ್ಟಿ ಆಡಂ ವಾಗ್ವಾದಕ್ಕಿಳಿದಿದ್ದಾರೆ. ಈ ವೇಳೆ ಆತ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರೊಂದಿಗೂ ಆಡಂ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆಡಂ ವಿರುದ್ಧ ಎಫ್ ಐಆರ್ ದಾಖಲಾಗಿದೆ.