ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ
ಅದಿತಿ ಪ್ರಭುದೇವ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಸಮೇತ ಸಂದೇಶ ಬರೆದುಕೊಂಡಿದ್ದಾರೆ. 2024 ರಲ್ಲಿ ಅಮ್ಮನಾಗುತ್ತಿರುವುದಾಗಿ ಅದಿತಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಜೊತೆಗೆ ಬೇಬಿ ಬಂಪ್ ಫೋಟೋವನ್ನು ಪ್ರಕಟಿಸಿದ್ದಾರೆ.
ಅದಿತಿ ಈ ಅಚ್ಚರಿಯ ಸಿಹಿ ಸುದ್ದಿ ಕೊಟ್ಟಿರುವುದು ಅವರ ಅಭಿಮಾನಿಗಳಿಗೂ ಖುಷಿಕೊಟ್ಟಿದೆ. ಇದು ನಿಜಕ್ಕೂ ನಮಗೆ ಹೊಸ ವರ್ಷಕ್ಕೆ ಸಿಕ್ಕ ಅಚ್ಚರಿ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಉದ್ಯಮಿ ಯಶಸ್ ಜೊತೆ ಅದಿತಿ 2022 ರ ನವಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಇಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸುದ್ದಿ ಕೊಟ್ಟಿದ್ದಾರೆ. ಇತ್ತೀಚೆಗೆ ಅದಿತಿ ಸಿನಿಮಾಗಳಿಂದ ದೂರವೇ ಉಳಿದಿದ್ದರು.