ಕೊರೊನಾ ಸೋಂಕಿಗೆ ಒಳಗಾದ ತಮನ್ನಾ ಆಸ್ಪತ್ರೆಗೆ ದಾಖಲು

ಮಂಗಳವಾರ, 6 ಅಕ್ಟೋಬರ್ 2020 (08:01 IST)
ಹೈದರಾಬಾದ್ : ನಟಿ ತಮನ್ನಾ ಭಾಟಿಯಾ ಅವರು ಕೊರೊನಾ ಸೋಂಕಿಗೆ ಒಳಗಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ರೋಗ ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಆ ವೇಳೆ ಅವರಿಗೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆ ತಮನ್ನಾ ಅವರ ಪೋಷಕರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಬಗ್ಗೆ ತಮನ್ನಾ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ