ಮಗುವಿನ ಆಗಮನದ ಬಳಿಕ ಮಸ್ತ್ ಆಗಿ ಫೋಟೋಗೆ ಪೋಸ್ ಕೊಟ್ಟ ಅವಿವಾ- ಅಭಿಷೇಕ್‌

Sampriya

ಸೋಮವಾರ, 23 ಡಿಸೆಂಬರ್ 2024 (17:20 IST)
Photo Courtesy X
ಈಚೆಗೆ ಮೊದಲ ಮಗುವನ್ನು ಸ್ವಾಗತಿಸಿದ್ದ ಜ್ಯೂ.ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವ ಮಗುವಿನ ಹೊಸದೊಂದು ಪೋಟೋಶೂಟ್ ಮಾಡಿಸಿದ್ದಾರೆ. ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಅವಿವಾ ಅವರು ಶೇರ್ ಮಾಡಿದ್ದಾರೆ.

ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಮತ್ತು ಅವಿವ ದಂಪತಿ ಮಿಂಚಿದ್ದಾರೆ. ಇಬ್ಬರೂ ರೊಮ್ಯಾಂಟಿಕ್ ಆಗಿ ಪೋಸ್ ಕೊಟ್ಟಿದ್ದಾರೆ. ಅಂದಹಾಗೆ, ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾಗಲು ಅವಿವ ಜೋಡಿ ಮಸ್ತ್ ಆಗಿ ರೆಡಿಯಾಗಿದ್ದಾರೆ.

ಪ್ರೀತಿಯಲ್ಲಿದ್ದ ಅವಿವಾ ಹಾಗೂ ಅಭಿಷೇಕ್ ಅವರು ಕಳೆದ ವರ್ಷ ಬೆಂಗಳೂರಿನಲ್ಲಿ ಮದುವೆಯಾದರು. ಈ ದಂಪತಿ ಈ ವರ್ಷದ ನ.12ರಂದು ಗಂಡು ಮಗುವಿಗೆ ಜನ್ಮ ನೀಡಿದರು.

ಇನ್ನೂ 'ಬ್ಯಾಡ್ ಮ್ಯಾನರ್ಸ್' ಸಿನಿಮಾ ಬಳಿಕ ಅಭಿಷೇಕ್ ಅವರು ಮದಗಜ, ಅಯೋಗ್ಯ ಡೈರೆಕ್ಟರ್ ಮಹೇಶ್ ಕುಮಾರ್ ಜೊತೆ ಕೈಜೋಡಿಸಿದ್ದಾರೆ. ಈ ಸಿನಿಮಾ ಯಾವಾಗ ಶುರು ಆಗಲಿದೆ ಎಂಬುದನ್ನು ಸದ್ಯದಲ್ಲೇ ಮಾಹಿತಿ ಹೊರಬೀಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ