ಕಾನೂನಿನ ಅಡಿಯಲ್ಲಿ ಎಲ್ಲರೂ ಸಾಮಾನರೇ; ಅಲ್ಲು ಅರ್ಜುನ್ ಬಂಧನ ಸಮರ್ಥಿಸಿದ ಸಿಎಂ ರೇವಂತ್ ರೆಡ್ಡಿ

Sampriya

ಶನಿವಾರ, 14 ಡಿಸೆಂಬರ್ 2024 (17:22 IST)
Photo Courtesy X
ತೆಲಂಗಾಣ: ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ತೆಲುಗು ಚಿತ್ರರಂಗದ ಸ್ಟಾರ್ ಅಲ್ಲು ಅರ್ಜುನ್ ಅವರ  ಬಂಧನವನ್ನು ಸಮರ್ಥಿಸಿಕೊಂಡಿದ್ದಾರೆ.

ಕಾನೂನಿನ ಅಡಿಯಲ್ಲಿ ಎಲ್ಲರೂ ಸಾಮಾನರೇ. ಅವರ ಸ್ಥಾನಮಾನವನ್ನು ಲೆಕ್ಕಿಸದೆ ಸಮಾನವಾಗಿ ಕಾನೂನು ಅನ್ವಯಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಅಲ್ಲು ಅರ್ಜುನ್ ಅವರ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಶುಕ್ರವಾರ ನವದೆಹಲಿಯಲ್ಲಿ ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಚರ್ಚಾ ವೇದಿಕೆಯಲ್ಲಿ ಮಾತನಾಡಿದ ರೇವಂತ್ ರೆಡ್ಡಿ ಅವರು, ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಆಕೆಯ ಮಗು ಆಸ್ಪತ್ರೆಗೆ ದಾಖಲಾದ ಘಟನೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂಬಂಧ ನಟನ ಬಂಧನವಾಗಿರುವುದರ ಬಗ್ಗೆಯೂ ಪ್ರತಿಕ್ರಿಯಿಸಿದರು.

ಪೊಲೀಸರು ಕಾನೂನಿನ ಪ್ರಕಾರ ನಡೆದುಕೊಂಡಿದ್ದು, ಬಂಧನದ ಹಿಂದೆ ಯಾವುದೇ ರಾಜಕೀಯ ಪ್ರೇರಣೆ ಇಲ್ಲ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ತಾರೆಯಾಗಿರಲಿ, ರಾಜಕೀಯ ನಾಯಕರಾಗಿರಲಿ ಕಾನೂನಿನ ಅಡಿಯಲ್ಲಿ ಎಲ್ಲರೂ ಸಾಮಾನರೇ. ಕಾಳಜಿ ಇಲ್ಲ. ಯಾರು ಅಪರಾಧ ಮಾಡಿದ್ದಾರೆ ಎಂಬುದರ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ-ಇದಕ್ಕೆ ಯಾರು ಹೊಣೆ? ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪ್ರೀಮಿಯರ್‌ನಲ್ಲಿ ಅಲ್ಲು ಅರ್ಜುನ್‌ನ ಕಾರ್ಯವೈಖರಿ ಬಗ್ಗೆ ಅವರು ಅಸಮಾಧಾನ ಹೊರಹಾಕಿದರು.

"ಅಲ್ಲು ಅರ್ಜುನ್ ಪೊಲೀಸರಿಗೆ ಮಾಹಿತಿ ನೀಡದೆ ಥಿಯೇಟರ್‌ಗೆ ಆಗಮಿಸಿದ್ದು, ಅಭಿಮಾನಿಗಳಲ್ಲಿ ಗೊಂದಲಕ್ಕೆ ಕಾರಣವಾಯಿತು. ಅವರು ಸದ್ದಿಲ್ಲದೆ ಥಿಯೇಟರ್‌ಗೆ ಬಂದು ಗಲಾಟೆ ಮಾಡದೆ ಚಿತ್ರ ವೀಕ್ಷಿಸಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು, ಎಂದು ಅವರು ಹೇಳಿದರು, ನಟನ ರ್ಯಾಲಿಯಿಂದ ಅಭಿಮಾನಿಗಳ ನೂಕುನುಗ್ಗಲಿಗೆ ಕಾರಣವಾಯಿತು ಮತ್ತು ಮಾರಣಾಂತಿಕ ಕಾಲ್ತುಳಿತಕ್ಕೆ ಕಾರಣವಾಯಿತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ