‘ಶಾಕುಂತಲಾ’ದಲ್ಲಿ ಅಲ್ಲು ಅರ್ಜುನ್ ಪುತ್ರಿಯ ನಟನೆಗೆ ಫ್ಯಾನ್ಸ್ ಫಿದಾ

ಶನಿವಾರ, 15 ಏಪ್ರಿಲ್ 2023 (08:40 IST)
ಹೈದರಾಬಾದ್: ಹುಲಿ ಹೊಟ್ಟೆಯಲ್ಲಿ ಹುಲಿಯೇ ಹುಟ್ಟುತ್ತದೆ ಎನ್ನುವುದಕ್ಕೆ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ಉದಾಹರಣೆಯಾಗಿದ್ದಾರೆ.

ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ‘ಶಾಕುಂತಲಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಪ್ರಮುಖ ಪಾತ್ರ ಮಾಡಿದ್ದಾರೆ. ಇದು ನಿನ್ನೆಯಷ್ಟೇ ಥಿಯೇಟರ್ ನಲ್ಲಿ ಬಿಡುಗಡೆಯಾಗಿದೆ.

ಸಿನಿಮಾದಲ್ಲಿ ಅಲ್ಲು ಅರ್ಹ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಇಷ್ಟು ಸಣ್ಣ ವಯಸ್ಸಿನಲ್ಲೇ ಅಲ್ಲು ಅರ್ಹಾ ಮನೋಜ್ಞವಾಗಿ ಅಭಿನಯಿಸಿದ್ದು, ಆಕೆ ಭವಿಷ್ಯದ ಸ್ಟಾರ್ ಆಗುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ ಪ್ರೇಕ್ಷಕರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ