ಹೈದರಾಬಾದ್: ಪುಷ್ಪ 2 ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್ ಆಗಿರುವುದರಿಂದ ಆಂಧ್ರಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿಯಿದ್ದು, ಅವರ ಅಭಿಮಾನಿಗಳು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪುಷ್ಪ 2 ರಿಲೀಸ್ ಬಳಿಕ ಸಂಧ್ಯಾ ಥಿಯೇಟರ್ ಗೆ ಭೇಟಿ ನೀಡಿದ್ದ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು. ಈ ವೇಳೆ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ನೂಕು ನುಗ್ಗಲು ನಡೆಸಿದ್ದರು. ಈ ವೇಳೆ ಕಾಲ್ತುಳಿತದಲ್ಲಿ ಸಾಕಷ್ಟು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಇಂದು ಪೊಲೀಸರು ಅವರ ನಿವಾಸದಿಂದಲೇ ಬಂಧಿಸಿ ಕರೆದೊಯ್ದಿದ್ದಾರೆ. ಈ ವೇಳೆ ಪತ್ನಿ ಸ್ನೇಹಾ ರೆಡ್ಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಅಪಾಯದ ಮುನ್ಸೂಚನೆ ಅರಿತ ಪೊಲೀಸರು ಚೀಕಟಪಲ್ಲಿ ಪೊಲೀಸ್ ಠಾಣೆಗೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಫ್ಯಾನ್ಸ್, ಹಾಗಿದ್ದರೆ ಘಟನೆ ವೇಳೆ ಜನರನ್ನು ನಿಯಂತ್ರಿಸಲು ಸಾಧ್ಯವಾಗದ ಪೊಲೀಸರ ವಿರುದ್ಧವೂ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.