ಮತ್ತೊಬ್ಬ ಸ್ಯಾಂಡಲ್ ವುಡ್ ನಟನಿಗೆ ಖಡಕ್ ವಾರ್ನ್ ಮಾಡಿದ ಅಂಬರೀಶ್

ಸೋಮವಾರ, 4 ಜೂನ್ 2018 (06:25 IST)
ಬೆಂಗಳೂರು : ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಗಡ್ಡ ತೆಗೆಯುವಂತೆ ವಾರ್ನ್ ಮಾಡಿರುವ ಸ್ಯಾಂಡಲ್ ವುಡ್ ನ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಇದೀಗ ಮತ್ತೊಬ್ಬ ಕನ್ನಡದ ಸ್ಟಾರ ನಟರಿಗೆ ಖಡಕ್ ಸೂಚನೆ ಕೊಟ್ಟಿದ್ದಾರಂತೆ.


ಹೌದು. ಅಂಬರೀಶ್ ಅವರ ಹುಟ್ಟು ಹಬ್ಬದಂದು ಅವರನ್ನು ಭೇಟಿ ಮಾಡಿ ವಿಶ್ ಮಾಡಲು ಬಂದ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು  ಅಂಬರೀಶ್ ಅವರ ಜೊತೆ ಸ್ವಲ್ಪ ಹೊತ್ತು ಸಮಯ ಕಳೆದಿದ್ದಾರೆ. ಆ ವೇಳೆ  ಅಂಬರೀಶ್ ಅವರು ಧ್ರುವಾಗೆ ಸಿನಿಮಾದ ಬಗ್ಗೆ ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ. ಧ್ರುವಾ ಒಂದು ಸಿನಿಮಾಗೆ ಕಮಿಟ್ ಆದ ಮೇಲೆ ಮತ್ತೊಂದು ಸಿನಿಮಾಗೆ ಕೈಹಾಕಲ್ಲ. ಆದ್ದರಿಂದ ಎರಡು ವರ್ಷಕ್ಕೆ ಒಂದೊಂದು ಸಿನಿಮಾ ಮಾಡಿಕೊಂಡು ಕೂರಬೇಡಿ, ವರ್ಷಕ್ಕೆ ಎರಡು-ಮೂರು ಸಿನಿಮಾ ಮಾಡೋದನ್ನ ಕಲಿ ಎಂದು ಖಡಕ್ ಆಗಿ ಸೂಚನೆ ಕೊಟ್ಟಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ