ದೊಡ್ಮನೆಯಿಂದ ಅನ್ನಸಂತರ್ಪಣೆ

ಮಂಗಳವಾರ, 9 ನವೆಂಬರ್ 2021 (07:57 IST)
ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ಅಕ್ಟೋಬರ್ 9) 12 ದಿನಗಳಾಗಿವೆ.
ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅನ್ನಸಂತರ್ಪಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಾದರೆ ಈ ಕಾರ್ಯಕ್ರಮ ಹೇಗೆ ನಡೆಯಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.  ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿದೆ. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಬಹುದು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿದೆ. 600ಕ್ಕೂ ಹೆಚ್ಚು ಅಡುಗೆ ಭಟ್ಟರು, ಹೆಲ್ಪರ್ಗಳು ಭಾಗಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಪ್ರಾರಂಭವಾಗಲಿದೆ.
20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ