ನಟ ಸುಶಾಂತ್ ಸಿಂಗ್ ರಜಪೂತ್ ಮನೆಯ ಮತ್ತೊಬ್ಬರು ಅರೆಸ್ಟ್

ಭಾನುವಾರ, 6 ಸೆಪ್ಟಂಬರ್ 2020 (16:03 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮತ್ತೊಬ್ಬ ಸಿಬ್ಬಂದಿಯನ್ನು ಎನ್ ಸಿ ಬಿ ಬಂಧನ ಮಾಡಿದೆ.

ಸಿಬ್ಬಂದಿ ದೀಪೇಶ್ ಸಾವಂತ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಬಂಧಿಸಿದೆ. ಡ್ರಗ್ಸ್ ತನಿಖೆಗೆ ಸಂಬಂಧಿಸಿದಂತೆ ಎನ್‌ಸಿಬಿಯು ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಸುಶಾಂತ್ ಅವರ ಮನೆ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಬಂಧನ ಮಾಡಿದೆ.
ಈಗ ದೀಪೇಶ್ ಸಾವಂತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಉಪನಿರ್ದೇಶಕ ಕೆಪಿಎಸ್ ಮಲ್ಹೋತ್ರಾ ಮಾತನಾಡಿ, "ದೀಪೇಶ್ ಸಾವಂತ್ ಅವರನ್ನು ಎನ್‌ಸಿಬಿ ಬಂಧಿಸಿ ಡ್ರಗ್ಸ್ ಗಳನ್ನು ಸಂಗ್ರಹಿಸುವ ಮತ್ತು ಸರಬರಾಜು ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಹೇಳಿಕೆಗಳು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ