ಡ್ರಗ್ ಬಲೆಯಲ್ಲಿ ಮತ್ತೊಬ್ಬ ಸ್ಯಾಂಡಲ್ ವುಡ್ ತಾರೆ?

ಗುರುವಾರ, 8 ಅಕ್ಟೋಬರ್ 2020 (09:53 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿಚಾರಣೆ ನಡೆಸಿದ ಪೊಲೀಸರಿಗೆ ಮಹತ್ವದ ವಿಚಾರಗಳು ತಿಳಿದುಬಂದಿದೆ ಎನ್ನಲಾಗಿದೆ.


ರಿಕ್ಕಿ ರೈ ಜತೆಗೆ ಸ್ಯಾಂಡಲ್ ವುಡ್ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಸ್ಟಾರ್ ನಟಿಯೊಬ್ಬರು ಡ್ರಗ್ ದಂಧೆಯಲ್ಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ರಿಕ್ಕಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯದಲ್ಲೇ ಆ ನಟಿಗೂ ಸಿಸಿಬಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ‍್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ