ಸಲಾರ್ ಸಿನಿಮಾಗೆ ಸೇರ್ಪಡೆಯಾದ ಮತ್ತೊಬ್ಬ ಸ್ಟಾರ್ ನಟ

ಬುಧವಾರ, 9 ಮಾರ್ಚ್ 2022 (09:30 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಬಹುಭಾಷಾ ಸಿನಿಮಾ ಸಲಾರ್ ಗೆ ಮತ್ತೊಬ್ಬ ಸ್ಟಾರ್ ನಟ ಎಂಟ್ರಿ ಕೊಟ್ಟಿದ್ದಾರೆ.

ನಾಯಕ ಪ್ರಭಾಸ್ ಈ ವಿಚಾರವನ್ನು ಖುದ್ದಾಗಿ ತಿಳಿಸಿದ್ದಾರೆ. ಸಲಾರ್ ಸಿನಿಮಾಗೆ ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿ ರಾಜ್ ಕೂಡಿಕೊಳ್ಳಲಿದ್ದಾರೆ ಎಂದು ಪ್ರಭಾಸ್ ಹೇಳಿದ್ದಾರೆ.

ಈಗಾಗಲೇ ಕೆಜಿಎಫ್ 2 ಸಿನಿಮಾವನ್ನು ಮಲಯಾಳಂನಲ್ಲಿ ಹಂಚಿಕೆ ಮಾಡುತ್ತಿರುವ ಪೃಥ್ವಿರಾಜ್ ಈಗ ಅದೇ ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರಂತೆ. ಸದ್ಯಕ್ಕೆ ಸಲಾರ್ ಶೂಟಿಂಗ್ ಹಂತದಲ್ಲಿದ್ದು, ಸದ್ಯದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ