ಬೆಂಗಳೂರು: ಕಳೆದ ತಿಂಗಳಿನಿಂದ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಮದುವೆ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದೀಗ ಸಿಕ್ಕಿರುವ ಅಧಿಕೃತ ಮಾಹಿತಿಯಂತೆ ಇದೇ ತಿಂಗಳ 28ರಂ ದು ಅನುಶ್ರೀ ಕೊಡಗು ಮೂಲದ ರೋಷನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ.
ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದಾರೆ. ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ.
`ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.