ಸುಳ್ಳು ಸುದ್ದಿಗಳ ವಿರುದ್ಧ ಸಿಡಿದೆದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ

ಭಾನುವಾರ, 18 ಏಪ್ರಿಲ್ 2021 (09:26 IST)
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ತಮ್ಮ ವಿರುದ್ಧ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.


ಇತ್ತೀಚೆಗೆ ಕೊರೋನಾ ಸೋಂಕಿತರಾಗಿ ಆಸ್ಪತ್ರೆ ಸೇರಿದ್ದ ಅರ್ಜುನ್ ಜನ್ಯಾ ಈಗ ಚೇತರಿಸಿಕೊಳ‍್ಳುತ್ತಿದ್ದಾರೆ. ಆದರೆ ಅವರ ಆರೋಗ್ಯ ಗಂಭೀರವಾಗಿದೆ. ಅವರ ಪತ್ನಿ ಕಣ್ಣೀರಿಡುತ್ತಿದ್ದಾರೆ ಎಂದು ಕೆಲವು ಯೂ ಟ್ಯೂಬ್ ಚಾನೆಲ್ ಗಳಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ.

ಇದು ಜನ್ಯಾ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಹಾಕಿರುವ ಜನ್ಯಾ ನಾನು ಚೇತರಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ನನ್ನ ಕೆಲಸಕ್ಕೆ ಮರಳಲಿದ್ದೇನೆ. ಆದರೆ ನನ್ನ ಬಗ್ಗೆ ಕೆಲವು ಯೂ ಟ್ಯೂಬ್ ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸುತ್ತವೆ. ಈ ಬಗ್ಗೆ ಸೈಬರ್ ಕ್ರೈಂ ಗಮನಕ್ಕೆ ತಂದಿರುವೆ. ಇಂತಹ ಸುಳ್ಳು ಸುದ್ದಿ ಬಿತ್ತರಿಸುತ್ತಿರುವ ಮಾಧ್ಯಮಗಳು ಕೂಡಲೇ ಈ ಸುದ್ದಿಗಳನ್ನು ತೆಗೆದು ಹಾಕಬೇಕು. ಇಲ್ಲದೇ ಹೋದರೆ ಕಾನೂನು ಕ್ರಮ ಕೈಗೊ‍ಳ್ಳುವುದಾಗಿ ಅರ್ಜುನ್ ಜನ್ಯಾ ಎಚ್ಚರಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ