ಸದ್ದಿಲ್ಲದೇ ಸಿನಿಮಾ ಮುಗಿಸಿದ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್
ಪುನೀತ್ ಕನಸಿನಂತೆ ಹೊಸ ಹೊಸ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಅಶ್ವಿನಿ ತಮ್ಮ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮತ್ತೊಂದು ಸಿನಿಮಾ ಮುಗಿಸಿದ್ದಾರೆ.
ಆಶಿಕಾ ರಂಗನಾಥ್ ನಾಯಕಿಯಾಗಿರುವ ಒ2 ಎಂಬ ಮೆಡಿಕಲ್ ಥ್ರಿಲ್ಲರ್ ಕಥಾಹಂದರದ ಸಿನಿಮಾ ಈಗ ಚಿತ್ರೀಕರಣ ಮುಗಿಸಿದೆ. ಈ ಸಿನಿಮಾಗೆ ಪಿಆರ್ ಕೆ ಬ್ಯಾನರ್ ನಲ್ಲಿ ಅಶ್ವಿನಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಚಿತ್ರಕ್ಕೆ ಪ್ರಶಾಂತ್ ರಾಜ್ ಮತ್ತು ರಾಘವ್ ನಾಯಕ್ ಆಕ್ಷನ್ ಕಟ್ ಹೇಳಿದ್ದಾರೆ.