ರಕ್ಷಿತ್ ಶೆಟ್ಟಿ ‘ಅವನೇ ಶ್ರೀಮನ್ನಾರಾಯಣ’ ಪ್ರಚಾರ ಶುರು
ನಾಡಹಬ್ಬ ದಸರಾ ಸಂದರ್ಭದಲ್ಲಿ ಚಿತ್ರತಂಡ ಪ್ರಚಾರ ಕೆಲಸಕ್ಕೆ ಚಾಲನೆ ನೀಡಿದ್ದು, ಮುಂದಿನ ತಿಂಗಳು ಸಿನಿಮಾ ರಿಲೀಸ್ ಎಂದು ಘೋಷಿಸಿದೆ. ತೆಲುಗು ಮತ್ತು ಮಲಯಾಳಂನಲ್ಲಿ ಪ್ರಚಾರ ಕೆಲಸ ಈಗಾಗಲೇ ಶುರುವಾಗಿದೆ. ಇದಕ್ಕಾಗಿ ಈಗಾಗಲೇ ಚಿತ್ರತಂಡದ ಜತೆಗೆ ರಕ್ಷಿತ್ ಶೆಟ್ಟಿ ಕೇರಳ, ಹೈದರಾಬಾದ್ ಎಂದು ಓಡಾಡುತ್ತಿದ್ದಾರೆ. ಬಿಡುಗಡೆ ದಿನಾಂಕ ಸದ್ಯದಲ್ಲೇ ಘೋಷಣೆಯಾಗಲಿದೆ.