ಅಯೋಧ್ಯೆ ತೀರ್ಪು: ಸೆಲೆಬ್ರಿಟಿಗಳು ಹೇಳಿದ್ದೇನು?

ಶನಿವಾರ, 9 ನವೆಂಬರ್ 2019 (09:50 IST)
ಬೆಂಗಳೂರು: ದೇಶವೇ ಕಾಯುತ್ತಿರುವ ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕುರಿತಂತೆ ಇಂದು ಸುಪ್ರೀಂಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.


ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಹಾಗಿದ್ದರೂ ಶಾಂತಿ ಕದಡುವ ಪ್ರಯತ್ನಗಳು ನಡೆದೇ ನಡೆಯುತ್ತವೆ.

ಹೀಗಾಗಿ ಸೆಲೆಬ್ರಿಟಿಗಳೂ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಶಾಂತಿ ಕಾಪಾಡಲು ಮನವಿ ಮಾಡುತ್ತಿದ್ದಾರೆ. ತಮ್ಮ ಇನ್ ಸ್ಟಾಗ್ರಾಂ ಪೇಜ್ ಮೂಲಕ ವಿಡಿಯೋ ಸಂದೇಶ ನೀಡಿರುವ ಸ್ಯಾಂಡಲ್ ವುಡ್ ನಟ ಅನಿರುದ್ಧ್, ತಾರಾ ಮತ್ತಿತರರು ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ