ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

Sampriya

ಮಂಗಳವಾರ, 15 ಜುಲೈ 2025 (17:37 IST)
Photo Credit X
ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಅಂತ್ಯಕ್ರಿಯೆ ಅವರ ಹುಟ್ಟೂರಾದ ಚನ್ನಪಟ್ಟಣದ ದಶಾವರದಲ್ಲಿ ನಡೆಯಿತು. 

ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆದಿದೆ.

ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಅವರ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.

ಅಂತ್ಯಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಪಲ್ಲಕ್ಕಿಯಲ್ಲಿಟ್ಟು ಅವರ ಪಾರ್ಥೀವ ಶರೀರವನ್ನು ತಂದು ಅಂತ್ಯಸಂಸ್ಕಾರ ಮಾಡಲಾಯಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ