ಬೆಂಗಳೂರು: ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ 2 ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ.
ಆದರೆ ಕರ್ನಾಟಕದಲ್ಲಿ ಬಿಡುಗಡೆಯಾಗುವುದು ಡೌಟು. ಕಾರಣ ತಮಿಳು ನಟ ಸತ್ಯರಾಜ್. ಅವರೇನು ಮಾಡಿದರು ಎಂಬ ಸಂಶಯವೇ? ಅವರ ಹೇಳಿಕೆಯೊಂದರಿಂದ ಈ ಅವಾಂತರವಾಗಿದೆ.
ಕಾವೇರಿ ಗಲಭೆ ಸಂದರ್ಭ ಸತ್ಯರಾಜ್ ಕರ್ನಾಟಕದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯೊಂದರ ಕಾರಣ ಈ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಎಂದು ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಈ ಚಿತ್ರದಲ್ಲಿ ಪ್ರಬಾಸ್ ಜತೆಗೆ ಸತ್ಯರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹೀಗಾಗಿ ಸತ್ಯರಾಜ್ ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ಚಿತ್ರ ಬಿಡುಗಡೆ ಮಾಡಬಾರದು ಎಂದು ಸಂಘಟನೆಗಳು ಒತ್ತಾಯಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ