ದರ್ಶನ್‌ ಮತ್ತು ಸಹಚರರಿಗೆ ಜಾಮೀನು: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿರುವ ಬೆಂಗಳೂರು ಪೊಲೀಸರು

Sampriya

ಮಂಗಳವಾರ, 17 ಡಿಸೆಂಬರ್ 2024 (14:41 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಅವರ ಆಪ್ತೆ ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ.

ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ. ನ್ಯಾಯಾಲಯದ ಮೆಟ್ಟಿಲೇರಲು ತಯಾರಿ ನಡೆದಿದ್ದು ಶೀಘ್ರವೇ ಅರ್ಜಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ತಿಳಿಸಿದ್ದಾರೆ.

ರಾಜ್ಯ ಗೃಹ ಸಚಿವಾಲಯದಿಂದ ಅನುಮತಿ ದೊರೆತ ಬೆನ್ನಲ್ಲೇ ಪೊಲೀಸರು ಚಾರ್ಜ್‌ಶೀಟ್‌ ಪ್ರತಿಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಈ ಎಲ್ಲಾ ಪ್ರಕ್ರಿಯೆಗಳು ಈಗ ಪೂರ್ಣಗೊಂಡಿದೆ.

ಡಿ.13 ರಂದು ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದಕ್ಕೂ ಮೊದಲು ದರ್ಶನ್‌ ವೈದ್ಯಕೀಯ ಕಾರಣ ನೀಡಿ 6 ವಾರಗಳ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ