ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಪವಿತ್ರಾ ಗೌಡಗೆ ಮುಂದುವರೆದ ಸೆರೆವಾಸ

Sampriya

ಗುರುವಾರ, 22 ಆಗಸ್ಟ್ 2024 (16:56 IST)
ಬೆಂಗಳೂರು: ಸಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್‌ ಮುಂದೂಡಿ ಆದೇಶ ಹೊರಡಿಸಿದೆ.

ಇದರಿಂದ ಬಿಡುಗಡೆಯ ನಿರೀಕ್ಷೆಯಲ್ಲಿದ್ದ ಪವಿತ್ರಾಗೆ ಶಾಕ್ ಆಗಿದ್ದು, ಜೈಲುವಾಸ ಮುಂದುವರೆಯಲಿದೆ.

ಹತ್ಯೆ ಪ್ರಕರಣ ಸಂಬಂಧ ಕಳೆದ 2ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇಂದು (ಆ.22) ಅದರ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ವಿಚಾರಣೆ ಆ.27ಕ್ಕೆ ಮುಂದೂಡಿ ನ್ಯಾಯಾಧೀಶ ಜೈಶಂಕರ್ ಆದೇಶ ನೀಡಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕರು ಪವಿತ್ರಾಗೌಡ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದರು. ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಾರೋಪಿಯಾಗಿರುವ ಪವಿತ್ರಾಗೆ ಜಾಮೀನು ನೀಡಬಾರದೆಂದು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದರು.

ಎರಡನೇ ಬಾರಿ ಅರ್ಜಿ ವಿಚಾರಣೆ ಮುಂದೂಡಿಕೆ: ಜಾಮೀನಿಗಾಗಿ ಪವಿತ್ರಾ ಗೌಡ ಪರ ವಕೀಲ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ  ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 19ರಂದು ವಿಚಾರಣೆ ನಡೆಸಿದ್ದ ಕೋರ್ಟ್ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಇಂದಿಗೆ ಮುಂದೂಡಿತ್ತು. ಇಂದು ವಿಚಾರಣೆ ಮಾಡಿದ ಕೋರ್ಟ್‌ ಅರ್ಜಿ ವಿಚಾರಣೆಯನ್ನು ಆಗಸ್ಟ್ 27ಕ್ಕೆ ಮುಂದೂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ