ಬೆಂಗಳೂರು: ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಬೆಂಗಳೂರಿನ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾನಸಿಕ ಖಿನ್ನತೆಗೊಳಗಾಗಿದ್ದ ಜಯಶ್ರೀ ಕೆಲವು ದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಈ ವೇಳೆ ಕಿಚ್ಚ ಸುದೀಪ್ ಸೇರಿದಂತೆ ಹಲವರು ಸಾಂತ್ವನ ಹೇಳಿದ್ದರು. ಹಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯತ್ತಿದ್ದ ಜಯಶ್ರೀ ಕೊನೆಗೂ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.