ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

Krishnaveni K

ಮಂಗಳವಾರ, 22 ಜುಲೈ 2025 (09:03 IST)
ನವದೆಹಲಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಇತರೆ ಪ್ರಮುಖ ಆರೋಪಿಗಳಿಗೆ ನೀಡಲಾಗಿರುವ ಜಾಮೀನು ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಇಂದು ಸುಪ್ರೀಂಕೋರ್ಟ್ ನೀಡಲಿದೆ.

ನಟ ದರ್ಶನ್ ಸೇರಿದಂತೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದು ಇಂದು ತೀರ್ಪು ಹೊರಬೀಳುವ ಸಾಧ್ಯತೆಯಿದೆ.

ದರ್ಶನ್ ಪರ ಇಂದು ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. ಅದಾದ ಬಳಿಕ ಉಳಿದ ಆರೋಪಿಗಳ ಪರ ಅವರವರ ವಕೀಲರು ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಕೋರ್ಟ್ ತೀರ್ಪು ನೀಡುವ ಸಾಧ್ಯತೆಯಿದೆ. ಅಥವಾ ತೀರ್ಪಿನ ದಿನಾಂಕವನ್ನು ಇನ್ನೊಂದು ದಿನಕ್ಕೆ ಮುಂದೂಡುವ ಸಾಧ್ಯತೆಯಿದೆ.

ದರ್ಶನ್ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದಕ್ಕೆ ಮೊನ್ನೆಯೇ ಸುಪ್ರೀಂಕೋರ್ಟ್ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತ್ತು. ಹೀಗಾಗಿ ಜಾಮೀನು ರದ್ದಾಗಿ ದರ್ಶನ್ ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ. ಆದರೆ ಇಂದು ಕಪಿಲ್ ಸಿಬಲ್ ಮಂಡಿಸಲಿರುವ ವಾದದ ಮೇಲೆ ದರ್ಶನ್ ಭವಿಷ್ಯ ನಿಂತಿದೆ. ಆದರೆ ಸದ್ಯಕ್ಕೆ ಅವರು ಥೈಲ್ಯಾಂಡ್ ನಲ್ಲಿ ಡೆವಿಲ್ ಶೂಟಿಂಗ್ ನಲ್ಲಿದ್ದಾರೆ. ಹೀಗಾಗಿ ಇಂದಿನ ಕೋರ್ಟ್ ಕಲಾಪದ ಬಗ್ಗೆ ಎಲ್ಲರಿಗೂ ಕುತೂಹಲವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ