ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ರಿಲೀಫ್‌: 7 ತಿಂಗಳ ಬಳಿಕ ಹೈಕೋರ್ಟ್‌ನಿಂದ ಜಾಮೀನು ಮಂಜೂರು

Sampriya

ಶುಕ್ರವಾರ, 13 ಡಿಸೆಂಬರ್ 2024 (14:45 IST)
ಬೆಂಗಳೂರು: ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೂಲಯ ಸೇರಿ ಇದೀಗ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ನಟ ದರ್ಶನ್ ತೂಗುದೀಪ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು  ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕಪೀಠದಿಂದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿ ನಟ ದರ್ಶನ್, ಆತನ ಸ್ನೇಹಿತೆ ಪವಿತ್ರಾಗೌಡ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಕಳೆದ ಕಳೆದ 6 ತಿಂಗಳಿಂದ‌ ಜೈಲಲ್ಲಿ ಇದ್ದ ಪವಿತ್ರಾಗೌಡ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಒಟ್ಟಾರೆಯಾಗಿ ಆರೋಪಿಗಳಾದ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಷ್ ಗೆ ಜಾಮೀನು ಮಂಜೂರಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗಿ ಹೊರಗೆ ಬರಲಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ