ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

Sampriya

ಮಂಗಳವಾರ, 6 ಮೇ 2025 (22:52 IST)
Photo Credit X
ಉಡುಪಿ: ಕಾಂತಾರ ಚಾಪ್ಟರ್‌ 1 ಸಿನಿಮಾದ ಶೂಟಿಂಗ್‌ ಬಳಿಕ ನೀರಿನಲ್ಲಿ ಈಜಲು ಹೋದ ಸಹ ಕಲಾವಿದರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ.

ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ ಚಿತ್ರದ ಸಹ ಕಲಾವಿದರ ಜೊತೆ ಕಪಿಲ್ ಹೋಗಿದ್ದಾಗ ಈ ಘಟನೆ ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ