ಬೆಂಗಳೂರು: ಬಿಗ್‌ಬಾಸ್ ವಿನ್ನರ್, ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣ ಸಂಬಂಧ ರೌಡಿಶೀಟರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಪ್ರಥಮ್‌ಗೆ ಬೆದರಿಕೆ ಹಾಕಿದ್ದ ರೌಡಿಶೀಟರ್ ಬೇಕರಿ ರಘು ಎಂಬಾತನನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸರು ಅರೆಸ್ಟ್ ಮಾಡಿದ್ದಾರೆ.
ಕಳೆದ ತಿಂಗಳು ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ಗೆ ಹಾಜರಾಗಿ ಬೇಕರಿ ರಘು ಜಾಮೀನು ಪಡೆದಿದ್ದರಿಂದ ಬಂಧನಕ್ಕೂ ಮುನ್ನವೇ ಜಾಮೀನು ಪಡೆದುಕೊಂಡಿದ್ದರು. ಇದೀಗ ಪ್ರಕರಣ ಸಂಬಂಧ ರಘುನನ್ನು ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಕಾರಣ ನೀಡಿ ಬಂಧಿಸಲಾಗಿದೆ.
ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ನಿಂದ ಕಳೆದ ತಿಂಗಳು ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಪ್ರತಿ ಭಾನುವಾರ ಠಾಣೆಗೆ ಬಂದು ಸಹಿ ಹಾಕಲು ಸೂಚನೆ ನೀಡಲಾಗಿತ್ತು.