ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ

ಸೋಮವಾರ, 6 ಮಾರ್ಚ್ 2023 (11:07 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗೆ ಪ್ರಾಜೆಕ್ಟ್ ಕೆ ಸಿನಿಮಾ ಶೂಟಿಂಗ್ ವೇಳೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

ಪ್ರಭಾಸ್ ನಾಯಕರಾಗಿರುವ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ಅಮಿತಾಭ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹೈದರಾಬಾದ್ ನಲ್ಲಿ ಶೂಟಿಂಗ್ ವೇಳೆ ಬಿದ್ದು ಬಿಗ್ ಬಿ ಪಕ್ಕೆಲುಬಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಇದೀಗ ಅವರು ಮುಂಬೈ ನಿವಾಸಕ್ಕೆ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ್ಕೀಡಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ