25 ಸಾವಿರ ಪೊಲೀಸರಿಗೆ ಫೇಸ್ ಶೀಲ್ಡ್ ನೀಡಿದ ಬಾಲಿವುಡ್ ನಟ

ಶುಕ್ರವಾರ, 17 ಜುಲೈ 2020 (14:44 IST)
ಹೆಚ್ಚುತ್ತಿರುವ ಕೊರೊನಾ ತಡೆಗೆ ಬಾಲಿವುಡ್ ನಟ ಸೋನು ಸೂದ್ ಅವರು ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ಕೊಟ್ಟಿದ್ದಾರೆ.

ಈ ಹಿಂದೆ ನೂರಾರು ವಲಸೆ ಕಾರ್ಮಿಕರ ಕುಟುಂಬಗಳಿಗೆ ಧನ ಸಹಾಯ ಮಾಡಿದ್ದ ಬಾಲಿವುಡ್ ನಟ ಸೋನು ಸೂದ್, ಇದೀಗ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ.

ಮಹಾರಾಷ್ಟ್ರ ಪೊಲೀಸರಿಗೆ ಫೇಸ್ ಶೀಲ್ಡ್ ಸಹಾಯ ಮಾಡಿದ್ದು, ಇದಕ್ಕೆ ಪೊಲೀಸ್ ಹಿರಿಯ ಅಧಿಕಾರಿಗಳು, ಅಭಿಮಾನಿಗಳು ನಟನಿಗೆ ಅಭಿನಂದನೆ ಸಲ್ಲಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ