ಸಂಜನಾ, ರಾಗಿಣಿ ಬಿಡುಗಡೆ ಮಾಡಲು ಬಾಂಬ್ ಬೆದರಿಕೆ!

ಮಂಗಳವಾರ, 20 ಅಕ್ಟೋಬರ್ 2020 (10:57 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯನ್ನು ಬಿಡುಗಡೆ ಮಾಡದೇ ಇದ್ದರೆ ಬಾಂಬ್ ಇರಿಸುವುದಾಗಿ ನ್ಯಾಯಾಧೀಶರಿಗೇ ಬೆದರಿಕೆ ಹಾಕಲಾಗಿದೆ.


ನ್ಯಾಯಾಲಯಕ್ಕೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗೂ ಬೆದರಿಕೆ ಪತ್ರ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಡ್ರಗ್ ಪ್ರಕರಣದ ಆರೋಪಿಗಳ ಜತೆ ಡಿಜೆ ಹಳ್ಳಿ ಪ್ರಕರಣದಲ್ಲಿ ಬಂಧಿತರಾಗಿರುವವರನ್ನೂ ಬಿಡುಗಡೆ ಮಾಡಬೇಕು. ಅವರು ಅಮಾಯಕರು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ