ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಆರೋಗ್ಯದಲ್ಲಿ: ಆಸ್ಪತ್ರೆಗೆ ದಾಖಲು

ಶನಿವಾರ, 25 ಮಾರ್ಚ್ 2023 (10:45 IST)
ಲಂಡನ್: ಖ್ಯಾತ ಗಾಯಕಿ ಬಾಂಬೆ ಜಯಶ್ರೀ ಆರೋಗ್ಯದಲ್ಲಿ ಏರುಪೇರಾಗಿದ್ದು, ಲಂಡನ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಲಂಡನ್ ಗೆ ತೆರಳಿದ್ದ ಜಯಶ್ರೀ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರೈನ್ ಹೆಮರೇಜ್ ಗೊಳಗಾದ ಗಾಯಕಿ ಹೋಟೆಲ್ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದೀಗ ಅವರ ಆರೋಗ್ಯ ಸುಧಾರಿಸಿದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ