ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಡುವೆ ಬ್ರೇಕ್ ಅಪ್. ಕಾರಣವೇನು ಗೊತ್ತಾ?

ಸೋಮವಾರ, 10 ಸೆಪ್ಟಂಬರ್ 2018 (07:19 IST)
ಬೆಂಗಳೂರು : ಕಳೆದ ವರ್ಷ ಎಂಗೇಜ್ ಮೆಂಟ್ ಮಾಡಿಕೊಂಡ ಸ್ಯಾಂಡಲ್ ವುಡ್ ನ ಕ್ಯೂಟ್ ಜೋಡಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಈಗ ಬ್ರೇಕಪ್ ಆಗಲಿದ್ದಾರೆ ಎಂಬ ಸುದ್ದಿ ಅವರ  ಆಪ್ತ ಮೂಲಗಳಿಂದ ತಿಳಿದುಬಂದಿದೆ.


ಇತ್ತೀಚೆಗಷ್ಟೇ ಬಿಡುಗಡೆಯಾದ ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮತ್ತು ವಿಜಯ್‌ ಲಿಪ್‌ಲಾಕ್‌ ಮಾಡಿಕೊಂಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆವಾಗಲೇ ರಶ್ಮಿಕಾ ಮತ್ತು ರಕ್ಷಿತ್‌ ದೂರವಾಗುತ್ತಿದ್ದಾರೆ ಎಂಬುದರ ಬಗ್ಗೆ ಭಾರಿ ಸುದ್ದಿಯಾಗಿತ್ತು. ಇದು ಸುಳ್ಳು ಎಂದೇ ಇಬ್ಬರೂ ಹೇಳಿಕೊಂಡಿದ್ದರು.


ಆದರೆ ಈಗ ಅದೇ ಸುದ್ದಿ ನಿಜವಾಗುತ್ತೆ ಎಂಬ ಮಾಹಿತಿಯನ್ನು ರಶ್ಮಿಕಾ ಕುಟುಂಬದ ಆಪ್ತರು ಮಾಹಿತಿ ನೀಡಿದ್ದಾರೆ. ಸದ್ಯ ಟಾಲಿವುಡ್ ನಲ್ಲಿ ಬ್ಯುಸಿ ಆಗಿರುವ ರಶ್ಮಿಕಾ ಮಂದಣ್ಣ ಸಿನಿಮಾಗಳ ಬಗ್ಗೆ ಹೆಚ್ಚು ಗಮನ ಹರಿಸಲು ನಿರ್ಧಾರ ಮಾಡಿದ್ದಾರಂತೆ. ರಕ್ಷಿತ್ ಮತ್ತು ರಶ್ಮಿಕಾ ಫ್ಯಾಮಿಲಿ ನಡುವೆ ಹೊಂದಾಣಿಕೆ ಸರಿಯಾಗದ ಕಾರಣ ನಿಶ್ಚಿತಾರ್ಥವನ್ನು ಇಲ್ಲಿಗೆ ಕೈಬಿಡುವ ಮನಸ್ಸು ಮಾಡಿದ್ದಾರಂತೆ. ನಿಶ್ಚಿತಾರ್ಥವನ್ನು ಮುರಿದುಕೊಳ್ಳುವ ಬಗ್ಗೆ ಇಡೀ ಕುಟುಂಬದವರ ಜೊತೆ ಕೂತು ಮಾತನಾಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ