ಕಾವೇರಿ ಹೋರಾಟಕ್ಕೆ ಸ್ಯಾಂಡಲ್ ವುಡ್, ಕಿರುತೆರೆ ಶೂಟಿಂಗ್ ಬಂದ್ ಮಾಡಿ ಬೆಂಬಲ

ಸೋಮವಾರ, 25 ಸೆಪ್ಟಂಬರ್ 2023 (09:20 IST)
File photo
ಬೆಂಗಳೂರು: ಕಾವೇರಿ ವಿವಾದ ಕುರಿತಂತೆ ನಾಳೆ ಕನ್ನಡ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಸ್ಯಾಂಡಲ್ ವುಡ್, ಕಿರುತೆರೆ ಕೂಡಾ ಬೆಂಬಲ ವ್ಯಕ್ತಪಡಿಸಿದೆ.

ನಾಳೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ಬಂದ್ ನಡೆಯಲಿದೆ. ಇದಕ್ಕೆ ಈಗಾಗಲೇ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಅದರಂತೆ ಸ್ಯಾಂಡಲ್ ವುಡ್ ಹಾಗೂ ಕಿರುತೆರೆ ಕಲಾವಿದರು, ತಂತ್ರಜ್ಞರೂ ಒಂದು ದಿನದ ಮಟ್ಟಿಗೆ ಶೂಟಿಂಗ್ ಬಂದ್ ಮಾಡಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ. ರೈತರ ಪರವಾಗಿ ಯಾವತ್ತಿಗೂ ಕನ್ನಡ ಚಿತ್ರರಂಗವಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷ ಎಂ.ಎನ್ ಸುರೇಶ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ