ಬೆಂಗಳೂರು ಕಂಬಳಕ್ಕೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್

ಭಾನುವಾರ, 26 ನವೆಂಬರ್ 2023 (06:20 IST)
ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳ ಉತ್ಸವಕ್ಕೆ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಮಿಸಲಿದ್ದಾರೆ.

ಬೆಂಗಳೂರು ಕಂಬಳಕ್ಕೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ನಿನ್ನೆಯೇ ಕಂಬಳ ಗದ್ದೆಯಲ್ಲಿ ಕೋಣಗಳ ಓಟ ಶುರುವಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಜನ ಬಂದು ಕಂಬಳ ವೀಕ್ಷಿಸುತ್ತಿದ್ದಾರೆ. ಕಂಬಳದ ಜೊತೆಗೆ ಕರಾವಳಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುತ್ತಿವೆ.

ಇಂದು ಮಧ್ಯಾಹ್ನ 1 ಗಂಟೆಯ ಸಭಾ ಕಾರ್ಯಕ್ರಮಕ್ಕೆ ಡಿ ಬಾಸ್ ದರ್ಶನ್ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ವೇಳೆ ಸಾಧಕ ಕುಸ್ತಿಪಟುಗಳಿಗೆ ಸನ್ಮಾನ ಕಾರ್ಯಕ್ರಮವಿರಲಿದೆ. ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಿಎಂ ಎಸ್.ಎಂ. ಕೃಷ್ಣ, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಬಿಜೆಪಿ ರಾಜ್ಯಾಧ‍್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳುತ್ತಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂಸದ ಡಿ.ಕೆ. ಸುರೇಶ್, ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮುಮತಾದವರು ಭಾಗಿಯಾಗಲಿದ್ದಾರೆ. ಬಳಿಕ ಅರ್ಜುನ್ ಜನ್ಯಾ ಮತ್ತು ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ