ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ನೆರವಾಗಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೆ

ಗುರುವಾರ, 8 ಆಗಸ್ಟ್ 2019 (09:13 IST)
ಬೆಂಗಳೂರು: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ನೆರವಿಗೆ ಧಾವಿಸುವಂತೆ ನಟ ದರ್ಶನ್ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.


ಹಿಂದೆ ಕೊಡಗಿನಲ್ಲಿ ನೆರೆ ಪ್ರವಾಹವಾದಾಗಲೂ ಚಾಲೆಂಜಿಂಗ್ ಸ್ಟಾರ್ ತಮ್ಮದೇ ರೀತಿಯಲ್ಲಿ ಸಹಾಯ ಮಾಡಿದ್ದರು. ಈಗ ಉತ್ತರ ಕರ್ನಾಟಕದ ಜನರ ಕೂಗಿಗೆ ಸ್ಪಂದಿಸಲು ಕರೆ ನೀಡಿದ್ದಾರೆ.

ನಮ್ಮ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಹಲವು ಹಳ‍್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನುಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ