ನಿಶ್ಚಿತಾರ್ಥ ಮಾಡಿಕೊಂಡ ಚಂದನ್-ಕವಿತಾ ಗೌಡ
ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ಜೊತೆಯಾಗಿ ನಟಿಸಿದ್ದ ಚಂದನ್-ಕವಿತಾ ಸ್ನೇಹಿತರಾಗಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ ಚಿಗುರೊಡೆದಿತ್ತು. ಇತ್ತೀಚೆಗೆ ಇಬ್ಬರೂ ಆಗಾಗ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜೊತೆಯಾಗಿರುವ ಫೋಟೋಗಳನ್ನು ಪ್ರಕಟಿಸಿ ತಾವಿಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನು ಪರೋಕ್ಷವಾಗಿ ಹೇಳುತ್ತಲೇ ಇದ್ದರು. ಇದೀಗ ಎಲ್ಲಾ ಗಾಸಿಪ್ ಗಳಿಗೆ ತೆರೆ ಎಳೆದ ಜೋಡಿ ತಮ್ಮಿಬ್ಬರ ಸಂಬಂಧವನ್ನು ಅಧಿಕೃತವಾಗಿ ಹೇಳಿಕೊಂಡಿದೆ.