ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿಯನದ ಚಾರ್ಲಿ 777 ಚಿತ್ರವು ಭಾರತದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ದೊಡ್ಡ ಸದ್ದುಮಾಡಿತ್ತು. ಕಿರಣ್ ರಾಜ್ ನಿರ್ದೇಶನದ ಈ ಚಿತ್ರವು ಇದೀಗ ದೂರದ ಜಪಾನ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.
ಪರಂವಃ ಸ್ಟುಡಿಯೋಸ್ ಮೂಲಕ ನಿರ್ಮಾಣವಾದ 777 ಚಾರ್ಲಿ ಸಿನಿಮಾ ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಪ್ರಾಣಿಪ್ರಿಯರ ಮನಗೆದ್ದ ಈ ಸಿನಿಮಾವು ಜೂನ್ 28ರಂದು ಜಪಾನ್ ದೇಶದ ಹಲವು ನಗರಗಳಲ್ಲಿ 777 ಚಾರ್ಲಿ ರಿಲೀಸ್ ಆಗಲಿದೆ.
ಬಾಲಿವುಡ್ ಹಾಗೂ ಟಾಲಿವುಡ್ನ ಹಲವು ಸಿನಿಮಾಗಳು ಜಪಾನ್‌ನಲ್ಲಿ ಬಿಡುಗಡೆ ಆಗಿ ಯಶಸ್ಸು ಕಂಡಿದ್ದುಂಟು. ಈಗ ಕನ್ನಡದ ಒಂದು ಸಿನಿಮಾ ಜಪಾನ್‌ನಲ್ಲಿ ತೆರೆ ಕಾಣಲು ಸಜ್ಜಾಗಿರುವುದು ಹೆಮ್ಮೆಯ ವಿಷಯ. 2023ರಲ್ಲಿ 777 ಚಾರ್ಲಿ ಸಿನಿಮಾ ಡಬ್ ಆಗಿ ಥೈಲ್ಯಾಂಡ್ನಲ್ಲಿ ತೆರೆಕಂಡಿತ್ತು.
ಚಾರ್ಲಿ ಸಿನಿಮಾ ಮುಂದಿನ ದಿನಗಳಲ್ಲಿ ರಷ್ಯಾ, ಲ್ಯಾಟಿನ್ ಅಮೆರಿಕ, ಜರ್ಮನಿ, ತೈವಾನ್ ಮುಂತಾದ ದೇಶಗಳಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
2022ರ ಜೂನ್ 10ರಂದು ಭಾರತದ 5 ಭಾಷೆಗಳಲ್ಲಿ ಬಿಡುಗಡೆಯಾಗಿ ಎಲ್ಲ ವರ್ಗದ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಈ ಸಿನಿಮಾ ಸೆಳೆದಿತ್ತು. ಬಿಗ್ ಬಾಸ್ ಖ್ಯಾತಿಯ ಸಂಗೀತಾ ಶೃಂಗೇರಿ, ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಅನೇಕ ಪ್ರಶಸ್ತಿಗಳನ್ನ ಬಾಚಿಕೊಂಡ ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿದೆ.