ಈ ತಿಂಗಳ ಕೊನೆಗೆ ಚಾರ್ಲಿ 777 ಅಪ್ ಡೇಟ್

ಭಾನುವಾರ, 7 ಫೆಬ್ರವರಿ 2021 (10:28 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಸಿನಿಮಾ ಬಗ್ಗೆ ಈ ತಿಂಗಳ ಕೊನೆಗೆ ಚಿತ್ರತಂಡ ಹೊಸ ಸುದ್ದಿಯೊಂದನ್ನು ಕೊಡಲಿದೆ.


ಕಾಶ್ಮೀರದಲ್ಲಿ ಅಂತಿಮ ಹಂತದ ಚಿತ್ರೀಕರಣ ಮುಗಿಸಿ ತವರಿಗೆ ಮರಳಿದ ಚಿತ್ರತಂಡ ಈಗ ಬಾಕಿ ಉಳಿದ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ತಿಂಗಳ ಕೊನೆಗೆ ಚಿತ್ರದ ಬಗ್ಗೆ ಅಪ್ ಡೇಟ್ ಕೊಡುವುದಾಗಿ ನಿರ್ದೇಶಕ ಕಿರಣ್ ರಾಜ್ ತಿಳಿಸಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ