12 ದಿನಗಳಲ್ಲಿ ₹ 500 ಕೋಟಿ ಕ್ಲಬ್ ಸೇರಿದ ಛಾವಾ: ಟಾಲಿವುಡ್ಗೆ ಎಂಟ್ರಿಯಾಗಲು ಸಜ್ಜಾದ ರಶ್ಮಿಕಾ ಸಿನಿಮಾ
ಮರಾಠಿ ಕಾದಂಬರಿಕಾರ ಶಿವಾಜಿ ಸಾವಂತ್ ಬರೆದಿರುವ ಛಾವಾ ಕೃತಿಯನ್ನು ಆಧರಿಸಿ ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನ ಕುರಿತ ಚಿತ್ರ ಇದಾಗಿದೆ. ಸಂಭಾಜಿ ಪಾತ್ರದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಇದ್ದಾರೆ. ಬಾಲಿವುಡ್ ನಟ ಅಕ್ಷಯ್ ಖನ್ನಾ ಪ್ರಮುಖ ಪಾತ್ರದಲ್ಲಿದ್ದಾರೆ.