ದಿ ಕಾಶ್ಮೀರ್ ಫೈಲ್ಸ್ ಗೆ ತೆರಿಗೆ ವಿನಾಯ್ತಿ ಘೋಷಿಸಿದ ಸಿಎಂ ಬೊಮ್ಮಾಯಿ
ಕಾಶ್ಮೀರಿ ಪಂಡಿತರ ಮೇಲೆ ನಡೆದ ದಾಳಿ ಬಗ್ಗೆ ಸಿನಿಮಾದಲ್ಲಿ ಪರಿಣಾಮಕಾರಿಯಾಗಿ ತೋರಿಸಲಾಗಿದ್ದು, ಈ ಸಿನಿಮಾ ಈಗ ಭಾರೀ ಚರ್ಚೆಯಲ್ಲಿದೆ. ಸಿನಿಮಾ ನೋಡಿದ ಎಷ್ಟೋ ಮಂದಿ ಕಾಶ್ಮೀರದಲ್ಲಿ ಈ ಹಿಂದೆ ಕಾಶ್ಮೀರಿ ಪಂಡಿತರು ಅನುಭವಿಸಿದ್ದ ಯಾತನೆಯನ್ನು ನೋಡಿ ಕಣ್ಣೀರು ಹಾಕಿದ್ದಾರೆ.
ಈ ಸಿನಿಮಾವನ್ನು ನಿನ್ನೆ ಒರೆಯಾನ್ ಮಾಲ್ ನಲ್ಲಿ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಸಿನಿಮಾಗೆ ತೆರಿಗೆ ವಿನಾಯ್ತಿ ಘೋಷಿಸಿದರು. ಈಗಾಗಲೇ ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆಯಿಂದ ಮುಕ್ತಿ ನೀಡಲಾಗಿದೆ.