ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಸಾಧು ಕೋಕಿಲಾ ಅವರ ತಾಯಿ ಮಂಗಳಾ ಶನಿವಾರದಂದು ನಿಧನರಾಗಿದ್ದಾರೆ.
ಇವರಿಗೆ 85 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಅವರ ಆರೋಗ್ಯ ತುಂಬಾ ಹದಗೆಟ್ಟಿರುವ ಹಿನ್ನಲೆಯಲ್ಲಿ ಅಂದು ಮಧ್ಯಾಹ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಅವರ ಪಾರ್ಥೀವ ಶರೀರವನ್ನು ಚಂದ್ರ ಲೇಔಟ್ ನ ಸಾಧು ಕೋಕೊಲಾ ಅವರ ನಿವಾಸದಲ್ಲಿ ಇಟ್ಟಿದ್ದು, ನಾಳೆ ಅಂತ್ಯಕ್ರಿಯೆ ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.