Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್
ಮಡೆನೂರ್ ಮನು ನಾಯಕರಾಗಿ ಅಭಿನಯಿಸಿರುವ ಕುಲದಲ್ಲಿ ಕೀಳ್ಯಾವುದೋ ಸಿನಿಮಾ ನಾಳೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಬಿಡುಗಡೆ ಪ್ರಚಾರದಲ್ಲಿ ಮನು ಸಾಕಷ್ಟು ತೊಡಗಿಸಿಕೊಂಡಿದ್ದರು. ಇದೀಗ ಸಿನಿಮಾ ಬಿಡುಗಡೆ ಹೊಸ್ತಿಲಲ್ಲೇ ಅವರಿಗೆ ಕಂಟಕ ಎದುರಾಗಿದೆ.
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಶೋ ಮೂಲಕ ಮನು ಖ್ಯಾತಿ ಪಡೆದರು. ಇದೀಗ ಸ್ಯಾಂಡಲ್ ವುಡ್ ನಲ್ಲೂ ಅವಕಾಶ ಗಿಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಈಗ ಕಿರುತೆರೆ ನಟಿಯೊಬ್ಬರು ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.
ಇದೀಗ ಪೊಲೀಸರು ಮನುಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮನು ಮೇಲೆ ಬಂದ ಆರೋಪದಿಂದ ಚಿತ್ರ ಬಿಡುಗಡೆಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.