ಶಿವರಾಜ್ ಕುಮಾರ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ

ಮಂಗಳವಾರ, 23 ಮೇ 2023 (15:56 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಚುನಾವಣಾ ಪ್ರಚಾರ ನಡೆಸಿದ್ದ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಪಕ್ಷದ ನಾಯಕ ರಣದೀಪ್ ಸುರ್ಜೇವಾಲ ಭೇಟಿ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಶಿವಣ್ಣ ಮತ್ತು ಗೀತಾ ಶಿವರಾಜ್ ಕುಮಾರ್ ದಂಪತಿಯನ್ನು ಭೇಟಿ ಮಾಡಿ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಶಿವರಾಜ್ ಕುಮಾರ್ ಒಬ್ಬ ನಟ ಮಾತ್ರವಲ್ಲ, ಅದಕ್ಕಿಂತಲೂ ಮೌಲ್ಯಯುತ ವ್ಯಕ್ತಿ. ಅವರು ಪಕ್ಷಕ್ಕೆ ಬೆಂಬಲಿಸಿದ್ದರಿಂದ ಕಾಂಗ್ರೆಸ್ ಗೆ ಹೆಚ್ಚು ಬಲ ಬಂತು ಎಂದು ರಣದೀಪ್ ಕೊಂಡಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ