ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

Sampriya

ಶುಕ್ರವಾರ, 22 ಆಗಸ್ಟ್ 2025 (19:00 IST)
Photo Credit X
ಬೆಂಗಳೂರು:  ನಟ ಕಿಚ್ಚ ಸುದೀಪ್ ಅವರು ಕೆಂಗೇರಿ ಬಳಿ ಖರೀದಿಸಿದ ಅರ್ಧ ಎಕರೆ ಜಾಗದಲ್ಲಿ ಡಾ. ವಿಷ್ಣುವರ್ಧನ್ ಅಭಿಮಾನ ಸ್ಮಾರಕಕ್ಕೆ ಚಾಲನೆ ಸಿಕ್ಕಿದೆ. 

ಆ ಜಮೀನನ್ನು ವಿಷ್ಣು ಸ್ಮಾರಕ ಮಾಡಲು ಹೊರಟಿದ್ದಾರೆ. ಅದಕ್ಕೆ ವೀರಕಪುತ್ರ ಶ್ರೀನಿವಾಸ್ ಮುಂದಾಳತ್ವ ವಹಿಸಿಕೊಂಡಿದ್ದು, ಇದೀಗ ಪುತ್ಥಳಿ ನಿರ್ಮಾಣಕ್ಕೆ ಅಡ್ವಾನ್ಸ್ ಕೊಡುವ ಮೂಲಕ ಕೆಲಸಕ್ಕೆ ಚಾಲನೆ ನೀಡಲಾಗಿದೆ.

ಇನ್ನೂ ವಿಷ್ಣವರ್ಧನ್ ಅವರ ಹುಟ್ಟುಹಬ್ಬದ ದಿನವಾದ ಸೆಪ್ಟೆಂಬರ್ 18ರಂದು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲಿ ಹಾಕಲು ಅಭಿಮಾನಿಗಳು ಮುಂದಾಗಿದ್ದಾರೆ. 

ಈಚೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಇದು ಅವರ ಅಭಿಮಾನಿಗಳಿಗೆ ಭಾರೀ ನೋವು ತಂದಿತ್ತು.  ಸೆಪ್ಟೆಂಬರ್ 18ರಂದು ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ. ಇದೇ ದಿನದಂದು ಮಹತ್ವದ ಕೆಲಸಕ್ಕೆ ದಾದಾರ ಫ್ಯಾನ್ಸ್ ಸಜ್ಜಾಗಿದ್ದಾರೆ.

ಇನ್ನೂ ಕಿಚ್ಚ ಅವರ ಹುಟ್ಟುಹಬ್ಬದ ದಿನದಂದು ವಿಷ್ಣುವರ್ಧನ್ ಅವರ ಸ್ಮಾರಕದ ಬ್ಲ್ಯೂಪ್ರಿಂಟ್ ಅನ್ನು ಸುದೀಪ್ ಅವರೇ ಅನಾವರಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ