ಹೈದರಾಬಾದ್ : ತೆಲುಗು ನಟ ರಾಜಕಾರಣಿ ಪವನ್ ಕಲ್ಯಾಣ್ ಅವರು ಶುಕ್ರವಾರ ಕೊರೊನಾ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಪಾಸಿಟಿವ್ ಬಂದಿದೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಅವರ ಜನಸೇನಾ ಪಕ್ಷ ಹೇಳಿಕೆಯನ್ನು ಬಿಡುಗಡೆ ಮಾಡಿ ಮಾಹಿತಿಯನ್ನು ದೃಢಪಡಿಸಿದೆ. ಪವನ್ ಕಲ್ಯಾಣ ಅವರು ವಕೀಲ್ ಸಾಬ್ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ವಕೀಲ್ ಸಾಬ್ ಚಿತ್ರತಂಡದ ಕೆಲವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹಾಗಾಗಿ ಪವನ್ ಕಲ್ಯಾಣ್ ಅವರು ಕೊರೊನಾ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿತ್ತು.
ಆದರೆ ಅವರು ಮೈಕೈ ನೋವು ಮತ್ತು ಜ್ವರದಿಂದ ಬಳಲುತ್ತಿದ್ದ ಕಾರಣ ಅವರಿಗೆ ಶುಕ್ರವಾರ ಮತ್ತೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಆ ವೇಳೆ ಪಾಸಿಟಿವ್ ಬಂದಿದೆ ಎಂಬುದಾಗಿ ತಿಳಿದುಬಂದಿದೆ. ಇದೀಗ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.