ಖ್ಯಾತ ನಿರ್ಮಾಪಕ ದಿಲ್ ರಾಜುವಿಗೆ ಕೊರೊನಾ

ಮಂಗಳವಾರ, 13 ಏಪ್ರಿಲ್ 2021 (13:46 IST)
ಹೈದರಾಬಾದ್ : ದೇಶದಾದ್ಯಂತ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದ್ದು, ಅನೇಕ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರಿಟಿಗಳು ಈ ಸೋಂಕಿಗೆ ಒಳಗಾಗಿದ್ದಾರೆ. ಇದೀಗ ಖ್ಯಾತ ನಿರ್ಮಾಪಕ ದಿಲ್ ರಾಜು ಅವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.

ಇತ್ತೀಚೆಗೆ ರಿಲೀಸ್ ಆದ ವಕೀಲ್ ಸಾಬ್ ಚಿತ್ರ ದಿಲ್ ರಾಜು ಅವರ ನಿರ್ಮಾಣದಲ್ಲಿ ಮೂಡಿಬಂದಿದೆ. ಈಗಾಗಲೇ ಈ ಚಿತ್ರದ ಹಲವರಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನಲೆಯಲ್ಲಿ ದಿಲ್ ರಾಜು ಅವರು ಕೊರೊನಾ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ.

ಪ್ರಸ್ತುತ ಅವರು ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ. ಹಾಗೇ ತಮಗೆ ಸೋಂಕಿನ ಲಕ್ಷಣಗಳಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಅಲ್ಲದೇ ತನ್ನ  ಸಂಪರ್ಕದಲ್ಲಿದ್ದವರು  ಕೊರೊನಾ ಟೆಸ್ಟ್ ಮಾಡಿಸುವಂತೆ ಕೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ