ಮೊದಲ ಬಾರಿಗೆ ಕ್ರೇಜಿ ಸ್ಟಾರ್ ರವಿಚಂದ್ರನ್ ಸೆಲ್ಫಿ ತೆಗೆದುಕೊಂಡಿದ್ದು ಯಾರ ಜೊತೆ ಗೊತ್ತಾ?

ಬುಧವಾರ, 27 ಜೂನ್ 2018 (15:32 IST)
ಬೆಂಗಳೂರು : ಯಾವತ್ತು ಸೆಲ್ಫಿ ತೆಗೆದುಕೊಳ್ಳದ ಸ್ಯಾಂಡಲ್ ವುಡ್ ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಮೊಟ್ಟ ಮೊದಲ ಬಾರಿಗೆ ವಿಶೇಷ ವ್ಯಕ್ತಿಯೊಬ್ಬರ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ.


ನಟ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ತಮ್ಮ ಪತ್ನಿ ಸುಮತಿ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಆ ಸೆಲ್ಫಿ ಫೋಟೋವನ್ನು ಅವರ ಮಗ ಮನೋರಂಜನ್ ರವಿಚಂದ್ರನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅದರ ಜೊತೆಗೆ "ಎಂದಿಗೂ ಸೆಲ್ಫಿ ತೆಗೆದುಕೊಳ್ಳದ ಅಪ್ಪ ಇಂದು ಮೊದಲ ಬಾರಿಗೆ ಅಮ್ಮನಿಗಾಗಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ" ಎಂದು ನಟ ಮನೋರಂಜನ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ