ತೆಲುಗು ಚಿತ್ರರಂಗದತ್ತ ಕ್ರೇಜಿಸ್ಟಾರ್ ರವಿಚಂದ್ರನ್

ಭಾನುವಾರ, 5 ಜೂನ್ 2022 (09:10 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಇಷ್ಟು ದಿನ ಕನ್ನಡದಲ್ಲಿ ನಾಯಕನಾಗಿ, ಪೋಷಕ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಮಿಂಚಿದ್ದರು. ಇದೀಗ ತೆಲುಗು ಚಿತ್ರರಂಗದತ್ತ ಹಾರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ತೆಲುಗಿನ ಸ್ಟಾರ್ ನಟ ಮಹೇಶ‍್ ಬಾಬು ಸಿನಿಮಾದಲ್ಲಿ ರವಿಚಂದ್ರನ್ ಅವರ ತಂದೆಯಾಗಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿಯಿದೆ. ಈಗಾಗಲೇ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಆದರೆ ಸಿನಿಮಾ ತಂಡದಿಂದ ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ. ರವಿಚಂದ್ರನ್ ಕನ್ನಡದಲ್ಲಿ ಈಗಾಗಲೇ ಮಾಣಿಕ್ಯ ಸಿನಿಮಾದಲ್ಲಿ ತಂದೆಯ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದರು. ಲವ್ವರ್ ಬಾಯ್ ಆಗಿದ್ದ ರವಿಚಂದ್ರನ್ ಈಗ ತಮ್ಮ ವಯಸ್ಸಿಗೆ ತಕ್ಕಂತೆ ಪ್ರಬುದ್ಧ ಪಾತ್ರ ನಿಭಾಯಿಸುತ್ತಿದ್ದಾರೆ. ಇದೀಗ ತೆಲುಗಿನಲ್ಲೂ ಅಂತಹದ್ದೇ ಒಂದು ಪಾತ್ರ ನಿರ್ವಹಿಸಲಿದ್ದಾರೆ ಎಂಬ ಸುದ್ದಿಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ