ಡಿ ಬಾಸ್ ದರ್ಶನ್, ಧ್ರುವ ಫ್ಯಾನ್ಸ್ ನಡುವೆ ನೀನಾ, ನಾನಾ ಚಾಲೆಂಜ್

Sampriya

ಶುಕ್ರವಾರ, 11 ಅಕ್ಟೋಬರ್ 2024 (18:26 IST)
Photo Courtesy X
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಹಾಗೂ ಧ್ರುವ ಸರ್ಜಾ ಅಭಿಮಾನಿಗಳ ನಡುವಿನ ಕೆಸರೆಚಾಟ ಈ ಹಿಂದಿನಿಂದಲೂ ನಡೆಯುತ್ತಲೇ ಬಂದಿದೆ. ಇದೀಗ ಮತ್ತೇ ಇಬ್ಬರ ಫ್ಯಾನ್ಸ್‌ ನಡುವೆ ಟಾಕ್ ವಾರ್ ಜೋರಾಗಿಯೇ ಇದೆ.

ದರ್ಶನ್ ಅವರು ಹತ್ಯೆ ಪ್ರಕರಣದಲ್ಲಿ ಜೈಲು ಸೇರುತ್ತಿದ್ದ ಹಾಗೇ ನಟ ಧ್ರುವ ಸರ್ಜಾ ಅವರು ಖಾಸಗಿ ವಾಹಿನಿಯೊಂದರಲ್ಲಿ ನೀಡಿದ ಹೇಳಿಕೆ ಡಿ ಬಾಸ್‌ ಫ್ಯಾನ್ಸ್‌ಗೆ ಮತ್ತಷ್ಟು ಕೋಪ ತರಿಸಿತ್ತು.

ಇದೀಗ ಇಂದು ಬಿಡುಗಡೆಯಾದ ಮಾರ್ಟಿನ್ ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  ಇದರ ಬೆನ್ನಲ್ಲೇ ದರ್ಶನ್ ಅಭಿಮಾನಿಗಳು ಹಾಗೂ ಧ್ರುವ ಸರ್ಜಾ ಫ್ಯಾನ್ಸ್ ನಡುವೆ ನೀನಾ ನಾನಾ ಚಾಲೆಂಜ್ ಹಾಕಿಕೊಂಡಿದ್ದಾರೆ.

ಶೀಘ್ರದಲ್ಲೇ ದರ್ಶನ್ ಅವರ ಸೂಪರ್ ಹಿಟ್ ಸಿನಿಮಾವಾದ ನವಗ್ರಹವನ್ನು ರೀ ರಿಲೀಸ್ ಮಾಡುತ್ತೇವೆ. ಧ್ರುವ ಸರ್ಜಾ ಅವರ ಮಾರ್ಟೀನ್ ಅಥವಾ ದರ್ಶನ್ ಅವರ ನವಗ್ರಹ ಸಿನಿಮಾನ ನೋಡೇ ಬಿಡೋಣ ಎಂದು ಚಾಲೆಂಜ್ ಹಾಕಿಕೊಂಡಿದ್ದಾರೆ.

ಇನ್ನು ನವಗ್ರಹ ಸಿನಿಮಾ ಮರು ಬಿಡುಗಡೆ ಬಗ್ಗೆ ನಿರ್ದೇಶಕ ದಿನಕರ್ ತೂಗುದೀಪ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ನಾಡಿನ ಸಮಸ್ತ ಜನತೆಗೆ ನಾಡಹಬ್ಬ ದಸರಾ ಹಾಗೂ ನವರಾತ್ರಿಯ ಹಾರ್ದಿಕ ಶುಭಾಶಯಗಳು. ನಮ್ಮ ನಲ್ಮೆಯ ಸೆಲೆಬ್ರಿಟಿಗಳಿಂದ ಪ್ರೀತಿಯ ಕೋರಿಕೆಯ ಮೇರೆಗೆ ಸೆಲೆಬ್ರಿಟಿಗಳಿಗಾಗಿ ಸೆಲೆಬ್ರಿಟಿಗಳಿಗೋಸ್ಕರ ನೀವು ನೋಡಿ ಮೆಚ್ಚಿ ಹಾರೈಸಿದ 'ನವಗ್ರಹ' ಮತ್ತೆ ಮರುಬಿಡುಗಡೆಗೆ ಸಿದ್ಧವಾಗಿದೆ.ನಿಮ್ಮ ಪ್ರೀತಿ-ಬೆಂಬಲ ಸದಾ ಕನ್ನಡ ಚಿತ್ರರಂಗದ ಮೇಲಿರಲಿ ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ