ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಾರ್ಲಿಂಗ್ ಕೃಷ್ಣ

ಭಾನುವಾರ, 26 ಜೂನ್ 2022 (09:54 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ಲಕ್ಕಿ ಮ್ಯಾನ್ ಸಿನಿಮಾ ಬಗ್ಗೆ ನಾಯಕ ನಟ ಡಾರ್ಲಿಂಗ್ ಕೃಷ್ಣ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ನಾಗೇಂದ್ರ ಪ್ರಸಾದ್ ನಿರ್ದೇಶನದ ಈ ಸಿನಿಮಾದಲ್ಲಿ ಪುನೀತ್ ಅತಿಥಿ ಪಾತ್ರ ಮಾಡಿರುವುದಲ್ಲದೆ, ಡ್ಯಾನ್ಸಿಂಗ್ ಸ್ಟಾರ್ ಪ್ರಭುದೇವ ಜೊತೆ ಅದ್ಭುತವಾಗಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೋಸ್ಕರವೇ ಜನ ಕಾಯ್ತಿದ್ದಾರೆ.

ಈಗ ಈ ಸಿನಿಮಾ ಇದೇ ಆಗಸ್ಟ್ ನಲ್ಲಿ ತೆರೆ ಕಾಣಲಿರುವುದಾಗಿ ಕೃಷ್ಣ ತಿಳಿಸಿದ್ದಾರೆ. ಆದರೆ ದಿನಾಂಕ ಇನ್ನೂ ಬಹಿರಂಗವಾಗಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ