ಕಣ್ಣಪ್ಪ ಚಿತ್ರದಲ್ಲಿ ಡಾರ್ಲಿಂಗ್‌ ಪ್ರಭಾಸ್: ರುದ್ರನಾಗಿ ಅಭಿಮಾನಿಗಳಲ್ಲಿ ಕಿಕ್ಕೇರಿಸಿದ ಬಾಹುಬಲಿ ಸ್ಟಾರ್‌

Sampriya

ಮಂಗಳವಾರ, 4 ಫೆಬ್ರವರಿ 2025 (16:58 IST)
Photo Courtesy X
ಹೈದರಾಬಾದ್‌: ಟಾಲಿವುಡ್‌ನ ಮಂಚು ವಿಷ್ಣು ಹೀರೋ ಆಗಿ ನಟಿಸುತ್ತಿರುವ ಚಿತ್ರದಲ್ಲಿ ಡಾರ್ಲಿಂಗ್‌ ಪ್ರಭಾಸ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ₹ 100 ಕೋಟಿ ಬಜೆಟ್‌ನ ಈ ಚಿತ್ರದಲ್ಲಿ ಪ್ರಭಾಸ್ ರುದ್ರನಾಗಿ ಕಾಣಿಸಿಕೊಂಡಿದ್ದಾರೆ.

ಬಹುನಿರೀಕ್ಷಿತ ಪ್ರಭಾಸ್‌ ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಹರಡಿದ ತಲೆಗೂದಲು, ಕೈಯಲ್ಲಿ ಅರ್ಧ ಚಂದ್ರಾಕೃತಿಯ ಕೋಲು ಹಿಡಿದು ಪ್ರಭಾಸ್ ಕಾಣಿಸಿಕೊಂಡಿದ್ದಾರೆ.

ಅವರ ಕೊರಳಲ್ಲಿ ರುದ್ರಾಕ್ಷಿ ಮಾಲೆ ಇದೆ. ಹೆಗಲಿಗೆ ಕೇಸರಿ ವಸ್ತ್ರವನ್ನು ಹೊದ್ದಿದ್ದಾರೆ. ಹಣೆಯಲ್ಲಿ ವಿಭೂತಿ ಇಟ್ಟುಕೊಂಡು ನಗುತ್ತಾ ಪ್ರಭಾಸ್ ಅವರು ಕಾಣಿಸಿಕೊಂಡಿದ್ದು, ಈ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

ಇನ್ನೂ ಕಣ್ಣಪ್ಪ ಸಿನಿಮಾದಲ್ಲಿ ಶಿವನಾಗಿ ಅಕ್ಷಯ್ ಕುಮಾರ್ ನಟಿಸಿದ್ದಾರೆ. ಶಿವನ ಅನುಯಾಯಿ ಪ್ರಭಾಸ್ ಬಣ್ಣ ಹಚ್ಚಿದ್ದಾರೆ. ಸಿನಿಮಾದಲ್ಲಿ ವಿಷ್ಣು ಮಂಚು ಜೊತೆ ಮೋಹನ್ ಲಾಲ್, ಕಾಜಲ್, ಪ್ರೀತಿ ಮುಕುಂದನ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ವಿಷ್ಣು ಮಂಚು ತಂದೆ ಮೋಹನ್ ಬಾಬು ನಿರ್ಮಾಣ ಮಾಡುತ್ತಿದ್ದಾರೆ. ಇದೇ ಏ.25ಕ್ಕೆ ಸಿನಿಮಾ ತೆರೆ ಮೇಲೆ ಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ